| ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿ: ಸಂದರ್ಶನ ಪಟ್ಟಿ ಬಿಡುಗಡೆ ಕರ್ನಾಟಕ ಲೋಕಸೇವಾ ಆಯೋಗವು() ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ಖಾಲಿ ಇದ್ದ ಸಹಾಯಕ ನಿರ್ದೇಶಕರ ಹುದ್ದೆಗಳ ನೇಮಕಾತಿಪ್ರಕ್ರಿಯೆ ನಡೆಸುತ್ತಿದ್ದುಸಂದರ್ಶನಕ್ಕೆ ಅರ್ಹರಾದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ ಸದರಿ ಹುದ್ದೆಗಳು ನಗರ ಮತ್ತು ಗ್ರಾಮಾಂತರ ಯೋಜನಾ ಇಲಾಖೆಯಲ್ಲಿ ಖಾಲಿ ಇದ್ದವು. 2020ರಲ್ಲಿ ನೇಮಕಾತಿಯ ಅಧಿಸೂಚನೆ ಹೊರಡಿಸಲಾಗಿತ್ತು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಆಯ್ಕೆ ಪಟ್ಟಿಯನ್ನು ನೋಡಬಹುದು. ಕೆಪಿಎಸ್‌ಸಿ ವೆಬ್‌ಸೈಟ್‌ನಲ್ಲಿ ಸಂದರ್ಶನದ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸಂದರ್ಶನಕ್ಕೆ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ದಿನಾಂಕ 21-12-2021 ರಂದ ಸಂದರ್ಶನ ನಡೆಯಲಿದೆ. ಈಗಾಗಲೇ ಅಭ್ಯರ್ಥಿಗಳಿಗೆ ವೇಳಾಪಟ್ಟಿ ನಿಗದಿಗೊಳಿಸಿವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಓದಿ:ಮೂಲ ವೇತನ ₹ 35 ಸಾವಿರ: ಬಿಇಎಲ್‌ನಲ್ಲಿ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಅಭ್ಯರ್ಥಿಗಳಿಗೆ ಸಂದರ್ಶನದ ಸೂಚನಾ ಪತ್ರಗಳನ್ನು ಕಳುಹಿಸಲಾಗಿದ್ದು, ಆಯೋಗದ ಸೂಚನೆಗಳನ್ನು ಓದಿಕೊಂಡು, ಪ್ರವೇಶ ಪತ್ರಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಲೂ ಸೂಚಿಸಿಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಆಯೋಗದ ವೆಬ್‌ಸೈಟ್‌ ನೋಡುವುದು. ಹಾಗೂ ಸಂದರ್ಶನವುಕೆಪಿಎಸ್‌ಸಿ ಕೇಂದ್ರ ಕಛೇರಿ, ಬೆಂಗಳೂರು ಇಲ್ಲಿ ನಡೆಯಲಿದೆ. ವೆಬ್‌ಸೈಟ್‌: ://... ಓದಿ:ಉತ್ತರ ಕೇಂದ್ರ ರೈಲ್ವೆ | ವಿವಿಧ ಹುದ್ದೆಗಳಿಗೆ ಅರ್ಜಿ: ಡಿಸೆಂಬರ್‌ 25 ಕಡೆ ದಿನ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.