ಉದ್ಯೋಗ ವಾರ್ತೆ: ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹುದ್ದೆಗಳು ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹುದ್ದೆಗಳು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಡೆಪ್ಯೂಟಿ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆ: ಡೆಪ್ಯೂಟಿ ಮ್ಯಾನೇಜರ್‌ ಹುದ್ದೆಗಳ ಸಂಖ್ಯೆ: 90 ಸ್ಥಳ: ದೇಶದೆಲ್ಲೆಡೆ ವಿದ್ಯಾರ್ಹತೆ: ಡೆಪ್ಯೂಟಿ ಮ್ಯಾನೇಜರ್ (ತಾಂತ್ರಿಕ) ಹುದ್ದೆಗೆ ಸಿವಿಲ್ ಎಂಜಿನಿಯರಿಂಗ್ ಪದವಿ ಮುಗಿಸಿರಬೇಕು. ಡೆಪ್ಯೂಟಿ ಮ್ಯಾನೇಜರ್ (ಎಫ್‌ ಅಂಡ್ ಎ) ಹುದ್ದೆಗೆ ವಾಣಿಜ್ಯ ಶಾಸ್ತ್ರದಲ್ಲಿ ಪದವಿ ಅಥವಾ ಸಿಎ, ಎಂಬಿಎ ಮುಗಿಸಿರಬೇಕು. ವಯೋಮಿತಿ; ಕನಿಷ್ಠ 18 ವರ್ಷ ಹಾಗೂ ಗರಿಷ್ಠ 45 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ ಹಾಗೂ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ. ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 500. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್‌ 30, 2021 ಹೆಚ್ಚಿನ ಮಾಹಿತಿಗೆ: .. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.