ದಾವಣಗೆರೆ: 119 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಂಗನವಾಡಿ ಕಾರ್ಯಕರ್ತೆಯಾಗಲು ಹತ್ತನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯರಾಗಲು ಕನಿಷ್ಠ 4ನೇ ತರಗತಿಯಲ್ಲಿ ತೇರ್ಗಡೆಯಾಗಿರಬೇಕು. ಹುದ್ದೆಗಳ ಸಂಖ್ಯೆ: 119 ಅಂಗನವಾಡಿ ಕಾರ್ಯಕರ್ತೆ: 19 ಅಂಗನವಾಡಿ ಸಹಾಯಕಿ: 101 ಅರ್ಜಿಯೊಂದಿಗೆ ಲಗತ್ತಿಸಬೇಕಾದ ದಾಖಲಾತಿಗಳು... 1) ಮಾಹಿತಿಯನ್ನು ಭರ್ತಿ ಮಾಡಿದ ಅರ್ಜಿ (ಆನ್‌ಲೈನ್‌ ) 2) ಜನನ ಪ್ರಮಾಣ ಪತ್ರ /ಜನ್ಮದಿನಾಂಕ ಇರುವ ಎಸ್ಎಸ್‌ಎಲ್‌ಸಿ ಅಂಕಪಟ್ಟಿ 3) ತಹಶೀಲ್ದಾರರು /ಉಪತಹಶೀಲ್ದಾರರು ಪಡೆದ 1 ವರ್ಷದೊಳಗಿನ ವಾಸಸ್ಥಳ ದೃಢೀಕರಣ 4) ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳುನ್ನು ಲಗತ್ತಿಸಬೇಕು. ಈ ಹುದ್ದೆಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸುವುದು. ಓದಿ:ಬೆಂಗಳೂರು ಮೆಟ್ರೊ ರೈಲು: ಸ್ಟೇಷನ್‌ ಕಂಟ್ರೋಲರ್‌ ಹುದ್ದೆಗಳಿಗೆ ಅರ್ಜಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-01-2022 ಅರ್ಜಿ ಸಲ್ಲಿಸುವ ವೆಬ್‌ಸೈಟ್‌: ://... ಓದಿ:ವೇತನ ₹21,700 | ಕೃಷಿ ಸಂಶೋಧನಾ ಸಂಸ್ಥೆಯಲ್ಲಿ 641 ಹುದ್ದೆಗಳಿಗೆ ಅರ್ಜಿ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.