: 6100 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಯ ಆಯ್ಕೆ ಪಟ್ಟಿ ಬಿಡುಗಡೆ ನವದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ6100 ಅಪ್ರೆಂಟಿಸ್‌ಹುದ್ದೆಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ಆನ್‌ಲೈನ್‌ ಪರೀಕ್ಷೆ ಬರೆದ ಅಭ್ಯರ್ಥಿಗಳು ಫಲಿತಾಂಶವನ್ನು ಎಸ್‌ಬಿಐನ ಅಧಿಕೃತ ವೆಬ್‌ಸೈಟ್‌ನಲ್ಲಿ ಚೆಕ್‌ ಮಾಡಿಕೊಳ್ಳಬಹುದು. ಸೆ. 17 ಮತ್ತು20ರಂದು ಆನ್‌ಲೈನ್‌ ಪರೀಕ್ಷೆ ನಡೆಸಲಾಗಿತ್ತು. ಈ ಹುದ್ದೆಗಳಿಗೆ ತಾತ್ಕಾಲಿಕವಾಗಿ ಆಯ್ಕೆಯಾದ ಅಭ್ಯರ್ಥಿಗಳ ರಿಜಿಸ್ಟರ್ ನಂಬರ್ ಅನ್ನು ಫಲಿತಾಂಶದ ಪಿಡಿಎಫ್‌ ಫೈಲ್‌ನಲ್ಲಿ ನೀಡಲಾಗಿದೆ. ಬ್ಯಾಂಕಿನ ಈ .../ ವೆಬ್‌ಸೈಟಿಗೆ ಲಾಗಿನ್‌ ಆಗಿ ಫಲಿತಾಂಶವನ್ನು ನೋಡಬಹುದು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.