ಭಾರತೀಯ ನೌಕಾಪಡೆ: 300 ನಾವಿಕ ಹುದ್ದೆಗಳು; ಅರ್ಜಿ ಸಲ್ಲಿಸಲು ನವೆಂಬರ್‌ 2 ಕಡೆ ದಿನ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ನಾವಿಕ (ಸೈಲರ್‌) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 300 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಹುದ್ದೆಗಳ ವಿವರ: 300 ಹುದ್ದೆಗಳು ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ:ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಏಪ್ರಿಲ್ 01, 2002 ರಿಂದ ಮಾರ್ಚ್ 31, 2005 ರ ನಡುವೆ ಜನಿಸಿರಬೇಕು. ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ₹14,600 ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ₹ 21,700- ₹69,100 ವೇತನ ನಿಡಲಾಗುವುದು. ನೇಮಕಾತಿ ವಿಧಾನ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಕ್ಷಮತೆ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಕರೆಯಲಾಗುವುದು. ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 02–11–2021 ವೆಬ್‌ಸೈಟ್: .... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.