: ನಿರ್ದೇಶಕರು, ಸಹಾಯಕರು, ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ ನ್ಯಾಷನಲ್ ಇನ್‌ಸ್ಟಿಟ್ಯೂಟ್‌ ಆಫ್‌ ಓಪನ್‌ ಸ್ಕೂಲಿಂಗ್ (ಎನ್‌ಐಒಎಸ್) ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿರ್ದೇಶಕರು, ಜಂಟಿ ನಿರ್ದೇಶಕರು, ಸಹಾಯಕರು, ಕ್ಲರ್ಕ್‌, ಸ್ಟೆನೋ ಸೇರಿದಂತೆ ವಿವಿಧಗಳ ನೇಮಕಾತಿ ಮಾಡಿಕೊಳ್ಳಲಾಗುವುದು. ಒಟ್ಟು ಹುದ್ದೆಗಳ ಸಂಖ್ಯೆ: 115 ವಿದ್ಯಾರ್ಹತೆ : ಪಿಯುಸಿ/ ಪದವಿ / ಸ್ನಾತಕೋತ್ತರ ಪದವಿ ಪಡೆದಿರಬೇಕು. ಸದರಿ ಹುದ್ದೆಗಳಿಗೆ ಸಂಬಂಧಪಟ್ಟಂತೆ ಅಗತ್ಯ ಅನುಭವ ಹೊಂದಿರಬೇಕು. ವೇತನ: ಕೇಂದ್ರ ಸರ್ಕಾರದ ವೇತನ ಆಯೋಗದ ಅನುಸಾರ ಮಾಸಿಕ ವೇತನ ನೀಡಲಾಗುವುದು. ವಯಸ್ಸು: ಕನಿಷ್ಠ–18 ಗರಿಷ್ಠ–35 ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ನೇಮಕಾತಿ ವಿಧಾನ:ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಕೆ ವಿಧಾನ:ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 10-10-2021 ವೆಬ್‌ಸೈಟ್‌: ://... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.