ಹೆಸ್ಕಾಂ | , ವಿದ್ಯಾರ್ಹತೆ: 200 ಅಪ್ರೆಂಟಿಸ್‌ಗಳಿಗೆ ಅರ್ಜಿ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) ಎಲೆಕ್ಟ್ರಿಷಿಯನ್ ವೃತ್ತಿ ತರಬೇತಿ ನೀಡಲು ಡಿಪ್ಲೊಮಾ ಹಾಗೂ ಪದವಿ ಪಡೆದ ಅಭ್ಯರ್ಥಿಗಳಿಂದ ಶಿಶುಕ್ಷು ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ... 1) ಡಿಪ್ಲೊಮ ಇನ್‌ ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ ತರಬೇತಿ ಹುದ್ದೆಗಳ ಸಂಖ್ಯೆ: 75 ತರಬೇತಿ ಅವಧಿ: 1 ವರ್ಷ ತರಬೇತಿ ಭತ್ಯೆ: ₹5000 ವಿದ್ಯಾರ್ಹತೆ:ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ ಡಿಪ್ಲೊಮಾ ಪಡೆದಿರಬೇಕು. 2) ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ ಪದವಿ ತರಬೇತಿ ಹುದ್ದೆಗಳ ಸಂಖ್ಯೆ: 125 ತರಬೇತಿ ಅವಧಿ: 1 ವರ್ಷ ತರಬೇತಿ ಭತ್ಯೆ:₹7000 ಮೆರೀಟ್‌ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಹೆಸ್ಕಾಂ ವೆಬ್‌ಸೈಟ್‌ ನೋಡುವುದು. ಅರ್ಜಿ ಸಲ್ಲಿಸಲು ಕೊನೆಯ ದಿನ:20-10-2021 ವೆಬ್‌ಸೈಟ್‌:://... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.