| 269 ಕಾನ್‌ಸ್ಟೆಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸೆ.22 ಕೊನೆ ದಿನ ಭಾರತೀಯ ಗಡಿ ಭದ್ರತೆಪಡೆಯಲ್ಲಿ 269 ಜನರ್‌ ಡ್ಯೂಟಿ ಕಾನ್‌ಸ್ಟೆಬಲ್‌ ಹುದ್ದೆಗಳ ನೇಮಕಾತಿಗಾಗಿ ಆರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಸದರಿ ಹುದ್ದೆಗಳನ್ನು ಕ್ರೀಡಾಕೋಟದ ಅಡಿಯಲ್ಲಿ ನೇಮಕಾತಿ ಮಾಡಿಕೊಳ್ಳಲಾಗುವುದು. ಕ್ರೀಡೆಗಳ ಮಾಹಿತಿ, ಅರ್ಜಿ ಸಲ್ಲಿಕೆ ವಿಧಾನ, ನೇಮಕಾತಿ ಪ್ರಕ್ರಿಯೆಯ ಮಾಹಿತಿಗಾಗಿ ಈ ಕೆಳಗೆ ನೀಡಿರುವ ವೆಬ್‌ಸೈಟ್‌ನಿಂದ ಮಾಹಿತಿ ಪಡೆಯಬಹುದು. ಹುದ್ದೆಯ ಹೆಸರು : ಕಾನ್‌ಸ್ಟೆಬಲ್‌ (ಜನರಲ್‌ ಡ್ಯೂಟಿ) ಹುದ್ದೆಗಳ ಸಂಖ್ಯೆ : 269 ವಿದ್ಯಾರ್ಹತೆ: ಅಂಗೀಕೃತ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರಬೇಕು. ವೇತನ : ಮಾಸಿಕ 21,700 - 69,100 ರವರೆಗೆ (ವಿವಿಧ ಭತ್ಯೆಗಳು ಸೇರಿ) ವಯೋಮಿತಿ ಅರ್ಹತೆಗಳು : ಕನಿಷ್ಠ 18 ವರ್ಷದಿಂದ ಗರಿಷ್ಠ 23 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಕಡೆ ದಿನಾಂಕ: 22-09-2021 ವೆಬ್‌ಸೈಟ್‌: ://... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.