ಉದ್ಯೋಗವಾರ್ತೆ: ಬಿಇಎಲ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳು ಬಿಇಎಲ್‌ನಲ್ಲಿ ಅಪ್ರೆಂಟಿಸ್ ಹುದ್ದೆಗಳು ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್‌ (ಬಿಇಎಲ್‌) ಡಿಪ್ಲೋಮಾ ಮುಗಿಸಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆ: ಡಿಪ್ಲೋಮಾ ಅಪ್ರೆಂಟಿಸ್‌ ಹುದ್ದೆಗಳ ಸಂಖ್ಯೆ: 80 ಸ್ಥಳ: ಗಾಜಿಯಾಬಾದ್‌ ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 3 ವರ್ಷಗಳ ಡಿಪ್ಲೋಮಾ ಕೋರ್ಸ್ ಅನ್ನು ಪೂರ್ಣಗೊಳಿಸಿರಬೇಕು. ಆಯ್ಕೆ ಪ್ರಕ್ರಿಯೆ: ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನ ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 15, 2021 ಹೆಚ್ಚಿನ ಮಾಹಿತಿಗೆ: -. ಕೆಎಸ್‌ಒಯುನಲ್ಲಿ ಬೋಧಕ ಹುದ್ದೆಗಳು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‌ಒಯು) ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳು: ಪ್ರೊಫೆಸರ್ ಹುದ್ದೆ ಹುದ್ದೆಗಳ ಸಂಖ್ಯೆ: 32 ಸ್ಥಳ: ಮೈಸೂರು ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ, ಸಿಎ, ಸ್ನಾತಕೋತ್ತರ ಪದವಿ, ಪಿಎಚ್‌ಡಿ, ಎಂಎ, ಬಿಯೆಡ್‌, ಎಂಯೆಡ್ ಮುಗಿಸಿರಬೇಕು. ವಯೋಮಿತಿ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕೆಎಸ್‌ಒಯು ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಕೆ ವಿಳಾಸ: ರಿಜಿಸ್ಟ್ರಾರ್‌, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಮುಕ್ತಗಂಗೋತ್ರಿ,ಮೈಸೂರು, ಕರ್ನಾಟಕ – 570006 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 11, 2021 ಹೆಚ್ಚಿನ ಮಾಹಿತಿಗೆ: .. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.