ಪೊಲೀಸ್‌ ಕಾನ್‌ಸ್ಟೇಬಲ್ ನೇಮಕಾತಿ ಪರೀಕ್ಷೆಯ ಕೀ ಉತ್ತರ ಪ್ರಕಟ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇದ್ದ 4000 ಪೊಲೀಸ್ ಕಾನ್‌ಸ್ಟೆಬಲ್‌ (ಸಿವಿಲ್) ಹುದ್ದೆಗಳ ನೇಮಕಾತಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಸದರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ಟೋಬರ್ 24, 2021 ರಂದು ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಅದರ ಸರಿ ಉತ್ತರಗಳನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಈ ಕೀ ಉತ್ತರಗಳ ಬಗ್ಗೆ ಆಕ್ಷೇಪಣೆ ಇದ್ದಲ್ಲಿ ಮನವಿ ಸಲ್ಲಿಸಬಹುದು ಎಂದು ಪೊಲೀಸ್‌ ಇಲಾಖೆ ಸೂಚನೆ ನೀಡಿದೆ. ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳು ತಾತ್ಕಾಲಿಕ ಸರಿ ಉತ್ತರಗಳನ್ನು ಪರೀಕ್ಷಿಸಲು ಈ ಕೆಳಗಿನ ವೆಬ್‌ಸೈಟ್‌ಗೆ ಲಾಗಿನ್‌ ಆಗುವುದು. ವೆಬ್‌ಸೈಟ್‌: ://cpc21.-. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.