ವಿದ್ಯಾರ್ಹತೆ: NPCILನಲ್ಲಿ 250 ಅಪ್ರೆಂಟಿಸ್‌ ಹುದ್ದೆಗಳಿಗೆ ಅರ್ಜಿ ನ್ಯೂಕ್ಲಿಯರ್ ಪವರ್ ಕಾರ್ಪೊರೇಶನ್‌ ಆಫ್‌ ಇಂಡಿಯಾ (ಎನ್‌ಪಿಸಿಐಎಲ್)ದಲ್ಲಿ ಖಾಲಿ ಇರುವ ಟ್ರೈನಿ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: ಐಟಿಐ ವಿಭಾಗದಲ್ಲಿ ಟ್ರೈನಿ ಅಪ್ರೆಂಟಿಸ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಕರ್ನಾಟಕ ರಾಜ್ಯದಲ್ಲೂ ಕೆಲವು ಹುದ್ದೆಗಳು ಖಾಲಿ ಇವೆ. ಹುದ್ದೆಗಳ ಸಂಖ್ಯೆ: 250 ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐಯಲ್ಲಿ ಉತ್ತೀರ್ಣರಾಗಿರಬೇಕು. ವಯಸ್ಸು: ನವೆಂಬರ್‌30, 2021ಕ್ಕೆ ಅನ್ವಯವಾಗುವಂತೆ 24 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ: ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ ಅವರಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ. ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ (ಕಂಪ್ಯೂಟರ್‌ ಟೆಸ್ಟ್‌) ಮೂಲಕ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:ನವೆಂಬರ್‌ 30, 2021 ವೆಬ್‌ಸೈಟ್‌:://..//. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.