ಕೋಲ್ ಇಂಡಿಯಾ: ಪದವೀಧರರಿಂದ 316 ಹುದ್ದೆಗಳಿಗೆ ಅರ್ಜಿ ಕೋಲ್ ಇಂಡಿಯಾ ಲಿಮಿಟೆಡ್‌ನ (ಸಿಐಎಲ್‌)ವೆಸ್ಟರ್ನ್‌ ಕೋಲ್‌ಫೀಲ್ಡ್‌ ಲಿಮಿಟೆಡ್‌ ಖಾಲಿ ಇರುವ ಗ್ರಾಜುಯೇಟ್‌, ಟೆಕ್ನಿಷಿಯನ್‌ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತಿ ಇರುವ ಅಭ್ಯರ್ಥಿಗಳು ಡಿಪ್ಲೊಮಾ, ಡಿಗ್ರಿ ಟೆಕ್ನಿಷಿಯನ್‌ ಕೋರ್ಸ್‌ಗಳನ್ನು ಪಾಸ್‌ ಮಾಡಿರಬೇಕು. ಹುದ್ದೆಗಳ ಸಂಖ್ಯೆ: 316 1) ಟೆಕ್ನೀಷಿಯನ್ ಅಪ್ರೆಂಟಿಸ್ (ಡಿಪ್ಲೊಮಾ) 215 2)ಗ್ರಾಜುಯೇಟ್‌ ಅಪ್ರೆಂಟಿಸ್ (ಡಿಗ್ರಿ) 101 ವಿದ್ಯಾರ್ಹತೆ: ಡಿಪ್ಲೊಮಾ ಹಾಗೂ ಬಿ.ಇ/ಬಿ.ಟೆಕ್, ಬಿಎಸ್‌.ಸಿ, ಎಂಸಿಎ, ಸಿಎ. (ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ). ವಯೋಮಿತಿ: 1 ಸೆಪ್ಟೆಂಬರ್ 2021ಕ್ಕೆ ಅನ್ವಯವಾಗುವಂತೆ 30 ವರ್ಷ ಮೀರಿರಬಾರದು. ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು, ಆರ್ಥಿಕವಾಗಿ ಹಿಂದುಳಿದ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹1,000. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ: 21-09-2021 ವೆಬ್‌ಸೈಟ್‌:://.. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.