ಭಾರತೀಯ ವಾಯುಪಡೆ: ಗ್ರೂಪ್‌ ’ಸಿ’ ಹುದ್ದೆಗಳ ನೇಮಕಾತಿಗೆ ಅರ್ಜಿ ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ವೆಬ್‌ಸೈಟ್‌ ನೋಡುವುದು. ಹುದ್ದೆಗಳ ಸಂಖ್ಯೆ: 125 ಹುದ್ದೆಗಳ ವಿವರ 1) ಕಾರ್ಪೆಂಟರ್‌–03 2) ಮಲ್ಟಿ ಟಾಸ್ಕಿಂಗ್‌–103 3) ಕ್ಲರ್ಕ್–10 4) ಸ್ಟೋರ್‌ ಕೀಪರ್‌ –06 5) ಸೂಪರ್‌ ವೈಸರ್–03 6) ಪೇಂಟರ್‌–02 7) ಮೇಸ್‌ ಸ್ಟಾಪ್‌ –01 ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗಳಿಗೆ ಅನುಸಾರವಾಗಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ವೇತನ: ಕೇಂದ್ರ ಸರ್ಕಾರದ ವೇತನ ಆಯೋಗದ ಅನುಸಾರ ವೇತನ ಸೇರಿದಂತೆ ಇತರೆ ಭತ್ಯೆಗಳನ್ನು ನೀಡಲಾಗುವುದು. ವಯಸ್ಸು:ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ 25 ವರ್ಷ ವಯೋಮಿತಿ ಮೀರಿರಬಾರದು. ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧನಾದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಕೆ ಕೊನೆ ದಿನ: 30–09–2021 ವೆಬ್‌ಸೈಟ್‌:://.. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.