ಉದ್ಯೋಗವಾರ್ತೆ; ಇಸಿಐಎಲ್‌ನಲ್ಲಿ ಟ್ರೇಡ್‌ ಅಪ್ರೆಂಟೀಸ್ ಹುದ್ದೆಗಳು ಇಸಿಐಎಲ್‌ನಲ್ಲಿ ಟ್ರೇಡ್‌ ಅಪ್ರೆಂಟೀಸ್ ಹುದ್ದೆಗಳು ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (ಇಸಿಐಎಲ್‌) 2021ನೇ ಸಾಲಿನ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಟ್ರೇಡ್ ಅಪ್ರೆಂಟೀಸ್ ಹುದ್ದೆಗಳಿಗೆ ಸೇರಲು ಬಯಸುವವರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆ: ಟ್ರೇಡ್ ಅಪ್ರೆಂಟೀಸ್‌ ಹುದ್ದೆಗಳ ಸಂಖ್ಯೆ: 243 ಸ್ಥಳ: ಭಾರತದೆಲ್ಲೆಡೆ ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ ಹಾಗೂ ಎನ್‌ಸಿವಿಟಿ ಪ್ರಮಾಣ ಪತ್ರ ಪಡೆದಿರಬೇಕು. ಹುದ್ದೆಗಳಿಗೆ ಅನುಗುಣವಾಗಿ ಸಂಬಂಧಿಸಿದ ಟ್ರೇಡ್‌ ಬಗ್ಗೆ ಅನುಭವವಿದ್ದವರಿಗೆ ಆದ್ಯತೆ. ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಶುಲ್ಕ: ಇಲ್ಲ ನೇಮಕಾತಿ ಪ್ರಕ್ರಿಯೆ: ಮೆರಿಟ್‌ ಹಾಗೂ ವೈಯಕ್ತಿಕ ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 16, 2021 ಹೆಚ್ಚಿನ ಮಾಹಿತಿಗೆ: ... ಕೃಪೆ: buddy4study. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.