ಉದ್ಯೋಗ ವಾರ್ತೆ: ಎನ್‌ಡಿಆರ್‌ಎಫ್‌ನಲ್ಲಿ 1978 ಹುದ್ದೆಗೆಳು ಎನ್‌ಡಿಆರ್‌ಎಫ್‌ನಲ್ಲಿ 1978 ಹುದ್ದೆಗಳು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) 1978 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹುದ್ದೆಗಳು: ಅಸಿಸ್ಟೆಂಟ್‌ ಕಮಾಂಡೆಂಟ್‌, ಇನ್‌ಸ್ಪೆಕ್ಟರ್‌, ಸಬ್ ಇನ್‌ಸ್ಪೆಕ್ಟರ್‌, ಹೆಡ್‌ ಕಾನ್ಸ್‌ಟೇಬಲ್‌ ಹಾಗೂ ಕಾನ್ಸ್‌ಟೇಬಲ್‌ ಹುದ್ದೆಗಳ ಸಂಖ್ಯೆ: 1978 ಸ್ಥಳ: ಭಾರತದೆಲ್ಲೆಡೆ ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ. ವಯೋಮಿತಿ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯಸ್ಸಾಗಿರಬೇಕು. ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಅಕ್ಟೋಬರ್‌ 18, 2021 ಅರ್ಜಿ ಸಲ್ಲಿಸುವ ವಿಳಾಸ: ಡಿಗ್‌, ಎಚ್‌ಕ್ಯೂ ಎನ್‌ಡಿಆರ್‌ಎಫ್‌, 6ನೇ ಮಹಡಿ, ಎನ್‌ಡಿಸಿಸಿ– 2ನೇ ಮಹಡಿ ಬಿಲ್ದಿಂಗ್‌, ಜೈ ಸಿಂಗ್‌ ರೋಡ್‌, ನವದೆಹಲಿ – 110001 ಹೆಚ್ಚಿನ ಮಾಹಿತಿಗೆ: .. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.