ಉಡುಪಿ ಜಿಲ್ಲಾ ನ್ಯಾಯಾಲಯ: ಸ್ಟೆನೋ ಹುದ್ದೆಗಳಿಗೆ ಅರ್ಜಿ ಉಡುಪಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಸ್ಟೆನೋ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಯ ಹೆಸರು : ಸ್ಟೆನೋ ಹುದ್ದೆಗಳ ಸಂಖ್ಯೆ: 8 ವಿದ್ಯಾರ್ಹತೆ:ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಪಾಸಾಗಿರಬೇಕು. ವೇತನ ಶ್ರೇಣಿ: ₹27,650-₹52,650 ( ವಿವಿಧ ಭತ್ಯೆಗಳು ಸೇರಿ) ವಯಸ್ಸು: ಕನಿಷ್ಠ–18 ಗರಿಷ್ಠ–35 ನೇಮಕಾತಿ ವಿಧಾನ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಕೆ ವಿಧಾನ: ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಕೆ ಕೊನೆ ದಿನ: 30-09-2021 ವೆಬ್‌ಸೈಟ್‌:://...////. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.