: ಆಫೀಸ್ ಅಸಿಸ್ಟಂಟ್ ಹುದ್ದೆಗಳ ಪ್ರಿಲಿಮ್ಸ್‌ ಪರೀಕ್ಷೆಯ ಫಲಿತಾಂಶ ಪ್ರಕಟ ನವದೆಹಲಿ: ಬ್ಯಾಂಕಿಂಗ್‌ ಪರೀಕ್ಷೆಗಳನ್ನು ನಡೆಸುವ ಐಬಿಪಿಎಸ್‌ 2021ರ 6888ಆಫೀಸ್ ಅಸಿಸ್ಟಂಟ್ ಹುದ್ದೆಗಳ ನೇಮಕಾತಿಯಪ್ರಿಲಿಮ್ಸ್‌ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳುಸೆಪ್ಟೆಂಬರ್ 7, 2021 ರವರೆಗೆ ಮಾತ್ರ ಫಲಿತಾಂಶ ನೋಡಬಹುದು ಎಂದು ಐಬಿಪಿಎಸ್ ಪ್ರಕಟಣೆಯಲ್ಲಿ ತಿಳಿಸಿದೆ. ಅಭ್ಯರ್ಥಿಗಳು ಐಬಿಪಿಎಸ್‌ನ ಅಧಿಕೃತ ವೆಬ್‌ಸೈಟ್‌ . ಗೆ ನೇರವಾಗಿ ಲಾಗಿನ್‌ ಆಗಿ ನಂತರ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್‌ ನೀಡಿ ಫಲಿತಾಂಶ ನೋಡಬಹುದು. ಪ್ರಿಲಿಮ್ಸ್‌ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದವರನ್ನು (ಶಾರ್ಟ್‌ ಲೀಸ್ಟ್‌) ಮುಖ್ಯ ಪರೀಕ್ಷೆಗೆ ಕರೆಯಲಾಗುವುದು. ವೆಬ್‌ಸೈಟ್‌: .. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.