₹ 62,000 ವೇತನ: ನ್ಯೂ ಇಂಡಿಯಾ ಅಶ್ಶೂರೆನ್ಸ್ ಕಂಪೆನಿಯಲ್ಲಿ 300 ಹುದ್ದೆಗಳು ನ್ಯೂ ಇಂಡಿಯಾ ಅಶ್ಶೂರೆನ್ಸ್ ಕೋ ಲಿಮಿಟೆಡ್ () ನಲ್ಲಿ ಖಾಲಿ ಇರುವ 300 ಆಡಳಿತಾತ್ಮಕ ಅಧಿಕಾರಿಗಳ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹುದ್ದೆಗಳ ಹೆಸರು: ಆಡಳಿತಾತ್ಮಕ ಅಧಿಕಾರಿ ಹುದ್ದೆಗಳ ಸಂಖ್ಯೆ: 300 ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ ಪಡೆದಿರಬೇಕು. ವೇತನ:₹ 62,000ರ ವರೆಗೆ ಮಾಸಿಕ ವೇತನ ನೀಡಲಾಗುವುದು. ವಯಸ್ಸು: ಅಭ್ಯರ್ಥಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯಸ್ಸಾಗಿರಬೇಕು. ವಯೋಮಿತಿ ಸಡಿಲಿಕೆ:ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಆಯ್ಕೆ ಪ‍್ರಕ್ರಿಯೆ: ಲಿಖಿತ ‍ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 21, 2021 ಹೆಚ್ಚಿನ ಮಾಹಿತಿಗೆ:://.../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.