2021: ಎಸ್‌ಬಿಐನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಎಸ್‌ಬಿಐನಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಸಿಸ್ಟೆಂಟ್ ಮ್ಯಾನೇಜರ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆ: ಅಸಿಸ್ಟೆಂಟ್ ಮ್ಯಾನೇಜರ್‌ ಸ್ಥಳ: ಭಾರತದಾದ್ಯಂತ ಹುದ್ದೆಗಳ ಸಂಖ್ಯೆ: 46 ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಪದವಿ ಪಡೆದಿರಬೇಕು. ವಯೋಮಿತಿ: ಅಭ್ಯರ್ಥಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ ವಯಸ್ಸಾಗಿರಬೇಕು. (ಏಪ್ರಿಲ್‌ 1, 2021ಕ್ಕೆ ಅನ್ವಯವಾಗುವಂತೆ). ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ₹ 750. ಎಸ್‌ಸಿ/ಎಸ್‌ಟಿ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ‍್ರಕ್ರಿಯೆ: ಆನ್‌ಲೈನ್ ಲಿಖಿತ ‍ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಸೆಪ್ಟೆಂಬರ್ 2, 2021 ಹೆಚ್ಚಿನ ಮಾಹಿತಿಗೆ: ://../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.