ಭಾರತ ಸರ್ಕಾರ: ಪವರ್ ಗ್ರಿಡ್‌ನಲ್ಲಿ 1110 ಅಪ್ರೆಂಟಿಸ್‌ಗಳ ನೇಮಕಕ್ಕೆ ಅರ್ಜಿ ಪವರ್ ಗ್ರಿಡ್‌ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ನಲ್ಲಿ ಖಾಲಿ ಇರುವ ಟ್ರೈನಿ ಅಪ್ರೆಂಟಿಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: ಐಟಿಐ, ಡಿಪ್ಲೋಮಾ, ಗ್ರ್ಯಾಜುಯೇಟ್‌ ಹಾಗೂ ಎಚ್‌ಆರ್‌ ವಿಭಾಗದಲ್ಲಿ ಟ್ರೈನಿ ಅಪ್ರೆಂಟಿಸ್‌ಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಕರ್ನಾಟಕ ರಾಜ್ಯದಲ್ಲೂ 114 ಹುದ್ದೆಗಳು ಖಾಲಿ ಇವೆ. ಹುದ್ದೆಗಳ ಸಂಖ್ಯೆ:1110 ವಿದ್ಯಾರ್ಹತೆ:ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು. ವಯಸ್ಸು:ಆಗಸ್ಟ್‌ 31, 2021ಕ್ಕೆ ಅನ್ವಯವಾಗುವಂತೆ 27 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ: ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ ಅವರಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಶುಲ್ಕ:ಸಾಮಾನ್ಯ ಹಾಗೂ ಒಬಿಸಿ ವರ್ಗದ ಪುರುಷ ಅಭ್ಯರ್ಥಿಗಳಿಗೆ ₹300 ಹಾಗೂ ಎಸ್‌ಸಿ, ಎಸ್‌ಟಿ, ಅಂಗವಿಕಲ ಹಾಗೂ ಮಾಜಿ ಸೈನಿಕರಿಗೆ ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ:ಲಿಖಿತ ಪರೀಕ್ಷೆ (ಕಂಪ್ಯೂಟರ್‌ ಟೆಸ್ಟ್‌) ಮೂಲಕ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:ಆಗಸ್ಟ್‌ 31, 2021 ವೆಬ್‌ಸೈಟ್‌:://.. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.