ಉದ್ಯೋಗವಾರ್ತೆ: ರಾಜ್ಯ ಪೊಲೀಸ್ ಮೀಸಲು ಪಡೆಯಲ್ಲಿ ಹುದ್ದೆಗಳು ರಾಜ್ಯ ಪೊಲೀಸ್ ಮೀಸಲು ಪಡೆಯಲ್ಲಿ ಹುದ್ದೆಗಳು ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಸ್ಥಳ: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ. ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಅಥವಾ ತತ್ಸಮಾನ ಮುಗಿಸಿರಬೇಕು. ವಯೋಮಿತಿ: ಕನಿಷ್ಠ 18 ವರ್ಷ (ಆಗಸ್ಟ್‌ 30, 2021ಕ್ಕೆ ಅನುಗುಣವಾಗುವಂತೆ). ಎಸ್‌ಸಿ/ ಎಸ್‌ಟಿ ಹಾಗೂ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ, ಇತರ ಅಭ್ಯರ್ಥಿಗಳಿಗೆ 30 ವರ್ಷ ಗರಿಷ್ಠ ವಯೋಮಾನ. ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ವರ್ಗದ ಅಭ್ಯರ್ಥಿಗಳಿಗೆ ₹ 250 ಮತ್ತು ಎಸ್‌ಟಿ/ ಎಸ್‌ಸಿ ಅಭ್ಯರ್ಥಿಗಳಿಗೆ ₹ 100 ಆಯ್ಕೆ ಪ್ರಕ್ರಿಯೆ: ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್ 30, 2021 ಹೆಚ್ಚಿನ ಮಾಹಿತಿಗೆ: ://ksrpfoll21.../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.