ಮೂಲ ವೇತನ ₹27,000: ಅಸ್ಸಾಂ ರೈಫಲ್ಸ್‌;1230 ಟ್ರೇಡ್ಸ್‌ಮನ್‌ ಹುದ್ದೆಗಳಿಗೆ ಅರ್ಜಿ ಅಸ್ಸಾಂ ರೈಫಲ್ಸ್‌ನಲ್ಲಿ ಖಾಲಿ ಇರುವ ತಾಂತ್ರಿಕಟ್ರೇಡ್ಸ್‌ಮನ್‌ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳನ್ನು ಅರೆಸೇನಾಪಡೆಯಗ್ರೂಪ್ ಬಿ, ಸಿ ವೃಂದಗಳ ನೇಮಕಾತಿ ಅಡಿಯಲ್ಲಿ ಆಯ್ಕೆ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ಮೂಲಕವೇ ಸಲ್ಲಿಸಬೇಕು. ಹುದ್ದೆಗಳ ವಿವರ... ಹುದ್ದೆಗಳ ಸಂಖ್ಯೆ: 1230 ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಎಸ್‌ಎಸ್‌ಎಲ್‌ಸಿ / ಪಿಯುಸಿ / ಡಿಪ್ಲೊಮಾ/ ಪದವಿ ವಿದ್ಯಾರ್ಹತೆ ಪಡೆದಿರಬೇಕು. ವೇತನ ಶ್ರೇಣಿ: ಮೂಲ ವೇತನ ₹27 ಸಾವಿರ ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುವುದು ವಯಸ್ಸು: ಸೆಪ್ಟೆಂಬರ್‌30, 2021ಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 23 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ: ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ ಅವರಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ. ಆಯ್ಕೆ ಪ್ರಕ್ರಿಯೆ: ದೈಹಿಕ ಹಾಗೂ ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:25-10-2021 ವೆಬ್‌ಸೈಟ್‌:://... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.