ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ವ್ಯಕ್ತಿತ್ವ ಪರೀಕ್ಷೆಯ ಅರ್ಹತಾ ಪಟ್ಟಿ ಪ್ರಕಟ ಕರ್ನಾಟಕ ಲೋಕಸೇವಾ ಆಯೋಗವುಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ವ್ಯಕ್ತಿತ್ವ ಪರೀಕ್ಷೆ ಹಾಗೂ ದೈಹಿಕ ಸಾಮರ್ಥ್ಯ ಪರೀಕ್ಷೆಗೆ ಅರ್ಹರಾದ ಅಭ್ಯರ್ಥಿಗಳ ಅರ್ಹತಾ ಪಟ್ಟಿಯನ್ನು ಪ್ರಕಟಿಸಿದೆ. 1:5ರ ಅನುಪಾತದಲ್ಲಿ ಅರ್ಹತಾ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಪರೀಕ್ಷೆಯ ದಿನಾಂಕವನ್ನು ಆಯೋಗ ಇನ್ನು ಪ್ರಕಟಿಸಿಲ್ಲ. ಆಯೋಗದ ವೆಬ್‌ಸೈಟ್‌ನಲ್ಲಿಶೀಘ್ರದಲ್ಲೇ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗುವುದು. ಅಭ್ಯರ್ಥಿಗಳು ಪ್ರವೇಶ ಪತ್ರದ ಜತೆಗೆ, ಅಗತ್ಯ ಇತರೆ ದಾಖಲೆಗಳನ್ನು ತೆಗೆದುಕೊಂಡು ಪರೀಕ್ಷೆಗೆ ಹಾಕರಾಗಬೇಕು ಎಂದು ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ. ವೆಬ್‌ಸೈಟ್‌: ://.... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.