ಭಾರತೀಯ ನೌಕಾಪಡೆ | ವಿದ್ಯಾರ್ಹತೆ: 350 ನಾವಿಕ ಹುದ್ದೆಗಳಿಗೆ ಅರ್ಜಿ ಭಾರತೀಯ ನೌಕಾಪಡೆಯಲ್ಲಿ ಖಾಲಿ ಇರುವ ನಾವಿಕ (ಸೈಲರ್‌) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 350 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಇದು 2021ರ ಆಗಸ್ಟ್‌ ಬ್ಯಾಚ್‌ ನೇಮಕಾತಿಯಾಗಿದ್ದು ಅವಿವಾಹಿತರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹುದ್ದೆಗಳ ವಿವರ: 350 ಹುದ್ದೆಗಳು ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 17 ರಿಂದ ಗರಿಷ್ಠ 20 ವರ್ಷ ಮೀರದವರು ಅರ್ಜಿ ಸಲ್ಲಿಸಬಹುದು. ವೇತನ ಶ್ರೇಣಿ: ತರಬೇತಿ ಸಮಯದಲ್ಲಿ ₹14,000 ನೀಡಲಾಗುವುದು. ತರಬೇತಿಯನ್ನು ಯಶಸ್ವಿಯಾಗಿ ಪೂರೈಸಿದ ಬಳಿಕ ₹ 21,700- ₹69,100 ವೇತನ ನಿಡಲಾಗುವುದು. ನೇಮಕಾತಿ ವಿಧಾನ: ಕಂಪ್ಯೂಟರ್‌ ಆಧಾರಿತ ಪರೀಕ್ಷೆ ಹಾಗೂ ದೈಹಿಕ ಕ್ಷಮತೆ ಪರೀಕ್ಷೆಮೂಲಕ ಆಯ್ಕೆ ನಡೆಯಲಿದೆ. ಕಂಪ್ಯೂಟರ್‌ ಆಧಾರಿತ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳನ್ನು ದೈಹಿಕ ಪರೀಕ್ಷೆಗೆ ಕರೆಯಲಾಗುವುದು. ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಇತರೆ ವಿಧಾನದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 23–07–2021 ವೆಬ್‌ಸೈಟ್:.... ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.