ಉದ್ಯೋಗ ವಾರ್ತೆ: ನಬಾರ್ಡ್‌ನಲ್ಲಿ ವಿವಿಧ ಹುದ್ದೆಗಳು ನಬಾರ್ಡ್‌ನಲ್ಲಿ ವಿವಿಧ ಹುದ್ದೆಗಳು ರಾಷ್ಟ್ರೀಯ ಕೃಷಿ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ನಬಾರ್ಡ್‌) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳು: ಮ್ಯಾನೇಜರ್‌, ಅಸಿಸ್ಟೆಂಟ್ ಮ್ಯಾನೇಜರ್‌ ಹುದ್ದೆಗಳ ಸಂಖ್ಯೆ: 162 ಸ್ಥಳ: ದೇಶದಲ್ಲೆಡೆ ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ವಯೋಮಿತಿ: ಕನಿಷ್ಠ 21 ವರ್ಷ ಹಾಗೂ ಗರಿಷ್ಠ 30 ವರ್ಷ. (ಜುಲೈ 1, 2021ಕ್ಕೆ ಅನುಗುಣವಾಗುವಂತೆ). ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ಹಾಗೂ ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ಆಯ್ಕೆ ಪ್ರಕ್ರಿಯೆ: ಪ್ರಾಥಮಿಕ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್‌ 7, 2021 ಹೆಚ್ಚಿನ ಮಾಹಿತಿಗಾಗಿ: . ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.