ಸಶಸ್ತ್ರ ಸೀಮಾ ಬಲ: 116 ಸಬ್‌ ಇನ್ಸ್‌ಪೆಕ್ಟರ್‌ ಹುದ್ದೆಗಳಿಗೆ ಅರ್ಜಿ ಕೇಂದ್ರ ಗೃಹ ಸಚಿವಾಲಯದಸಶಸ್ತ್ರ ಸೀಮಾ ಬಲದಲ್ಲಿ ಖಾಲಿ ಇರುವ ಸಬ್‌ ಇನ್ಸ್‌ಪೆಕ್ಟರ್‌ (ತಾಂತ್ರಿಕ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿ ಸಲ್ಲಿಸಿ. ಹುದ್ದೆಗಳ ಸಂಖ್ಯೆ: 116 ವಿದ್ಯಾರ್ಹತೆ: ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು (ಹುದ್ದೆಗಳಿಗೆ ಸಂಬಂಧಿಸಿದಂತೆ) ವಯಸ್ಸು: ಜುಲೈ 2021ಕ್ಕೆ ಅನ್ವಯವಾಗುವಂತೆ 20ರಿಂದ 30 ವರ್ಷದೊಳಗಿನವರಾಗಿರಬೇಕು. ವಯೋಮಿತಿ:ಸಾಮಾನ್ಯ ಹಾಗೂ ಮೀಸಲಾತಿ ರಹಿತ ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 30 ವರ್ಷ ( ಜುಲೈ 2021ಕ್ಕೆ ಅನ್ವಯವಾಗುವಂತೆ). ಎಸ್‌ಸಿ/ ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ. ಆಯ್ಕೆ ಪ್ರಕ್ರಿಯೆ: ದೈಹಿಕ ಕ್ಷಮತೆ ಹಾಗೂ ಲಿಖಿತ ಪರೀಕ್ಷೆ ಮೂಲಕ ಅಂತಿಮ ನೇಮಕಾತಿ ನಡೆಯಲಿದೆ. ಅರ್ಜಿ ಶುಲ್ಕ:ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ. ಸಾಮಾನ್ಯ ಹಾಗೂ ಇತರೆ ವರ್ಗಗಳ ಅಭ್ಯರ್ಥಿಗಳಿಗೆ ₹200 ಅರ್ಜಿ ಸಲ್ಲಿಸಲು ಕೊನೆಯ ದಿನ: 29, ಜುಲೈ 2021. ಹೆಚ್ಚಿನ ಮಾಹಿತಿಗೆ: ://.. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.