ಸೇನಾ ಪ್ರವೇಶ ಪರೀಕ್ಷೆ 25ಕ್ಕೆ ಬೆಂಗಳೂರು: ಭಾರತೀಯ ಸೇನೆಯು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆಯು (ಸಿಇಇ) ಇದೇ 25ರಂದು ರಾಜ್ಯದ ಮೂರು ಕೇಂದ್ರಗಳಲ್ಲಿ ನಡೆಯಲಿದೆ. ದೈಹಿಕ ಸಾಮರ್ಥ್ಯ ಮತ್ತು ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಈ ಲಿಖಿತ ಪರೀಕ್ಷೆಗೆ ಹಾಜರಾಗಬಹುದು. ಬೆಂಗಳೂರಿನ ಕಾಮರಾಜ ರಸ್ತೆಯಲ್ಲಿರುವ ಸೇನಾ ಶಾಲೆ, ಮಂಗಳೂರಿನ ಮೂಡುಬಿದಿರೆಯಲ್ಲಿರುವ ಆಳ್ವಾಸ್‌ ಸಂಸ್ಥೆ, ಬೆಳಗಾವಿಯ ಕೆಎಲ್‌ಇ ಸೊಸೈಟಿ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಸೇನಾ ಪ್ರಕಟಣೆ ತಿಳಿಸಿದೆ. ಈ ಮೊದಲು, ಏಪ್ರಿಲ್‌ 25ರಂದು ಸಿಇಇ ನಿಗದಿಯಾಗಿತ್ತು. ಆದರೆ, ಕೋವಿಡ್ ಕಾರಣದಿಂದ ಮುಂದೂಡಲಾಗಿತ್ತು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.