ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ: ಕ್ಲರ್ಕ್‌ ಹುದ್ದೆಗಳ ಪ್ರವೇಶ ಪತ್ರ ಬಿಡುಗಡೆ ನವದೆಹಲಿ:ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಕ್ಲರ್ಕ್‌ ಹುದ್ದೆಗಳ ನೇಮಕಾತಿ ಪರೀಕ್ಷೆಯ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ ಕಲ್ಪಿಸಿದೆ. ಕ್ಲರ್ಕ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರು ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಜುಲೈ 10 ರಿಂದ 13ರ ವರೆಗೆ ಪರೀಕ್ಷೆ ದೇಶದ ನಾನಾ ಭಾಗಗಳಲ್ಲಿ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರದಲ್ಲಿ ನೀಡಲಾದ ಸೂಚನೆಗಳನ್ನು ತಪ್ಪದೇ ಓದಿಕೊಂಡು ಪಾಲಿಸಬೇಕು. ಹಾಗೂ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಬೇಕು ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಎಂದು ಅಭ್ಯರ್ಥಿಗಳಲ್ಲಿ ಮನವಿ ಮಾಡಿದೆ. ಬ್ಯಾಂಕಿನ ಈ .../ ವೆಬ್‌ಸೈಟಿಗೆ ಲಾಗಿನ್‌ ಆಗಿ ಪ್ರವೇಶ ಪತ್ರಗಳನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.