ಪದವೀಧರರಿಗೆ ಉದ್ಯೋಗ: ಬ್ಯಾಂಕಿಂಗ್‌ ಕ್ಷೇತ್ರದಲ್ಲಿ 10,447 ಹುದ್ದೆಗಳಿಗೆ ಅರ್ಜಿ ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂಬ ಇಚ್ಚೆ ಇರುವವರಿಗೆ ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (ಐಬಿಪಿಎಸ್‌) ಅವಕಾಶ ಕಲ್ಪಿಸಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು. ಒಟ್ಟು 10,447 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮಲ್ಟಿಪರ್ಪಸ್‌ ಹಾಗೂ ಐಟಿ, ಕೃಷಿ, ಕಾನೂನು, ಎಚ್‌ಆರ್‌, ಮಾರ್ಕೆಟಿಂಗ್‌ ಹಾಗೂ ರಾಜಭಾಷೆ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತರ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಈ ಸಲ ರಾಜ್ಯದ ಅಭ್ಯರ್ಥಿಗಳು ಕನ್ನಡ ಮಾಧ್ಯಮದಲ್ಲೂ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗಿದೆ. ಹುದ್ದೆಗಳ ವಿವರ 1) ಆಫೀಸ್ ಅಸಿಸ್ಟೆಂಟ್‌ (ಮಲ್ಟಿಪರ್ಪೋಸ್ ) - 5096 2) ಆಫೀಸರ್ ಸ್ಕೇಲ್‌ (1) –4119 3) ಆಫೀಸರ್ ಸ್ಕೇಲ್‌ ( 2) –1232 ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಎಂಬಿಎ, ಸಿಎ, ಸ್ನಾತಕೋತ್ತರ ಪದವಿ ಪಡೆದಿರಬೇಕು. ವಿದ್ಯಾರ್ಹತೆಯ ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ಕ್ಲಿಕ್ಕಿಸಿ ಮಾಹಿತಿ ಪಡೆಯಬಹುದು. ವಯಸ್ಸು: ಜೂನ್, 2021ಕ್ಕೆ ಅನ್ವಯವಾಗುವಂತೆ 20ರಿಂದ 30 ವರ್ಷದೊಳಗಿನವರಾಗಿರಬೇಕು. (ಮೀಸಲಾತಿ ನಿಯಮಗಳು ಅನ್ವಯಿಸುತ್ತವೆ). ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಮಗವಿಕಲರಿಗೆ 10 ವರ್ಷಗಳು. ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹850, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ₹175. ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ: 28-06-2021 ಅಧಿಸೂಚನೆಯ ಲಿಂಕ್‌: ://../-//-_CRP--X_final_final. ಹೆಚ್ಚಿನ ಮಾಹಿತಿಗೆ: ://../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.