ಪವರ್‌ ಗ್ರಿಡ್ ಕಾರ್ಪೊರೇಷನ್: ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ನವದೆಹಲಿ: ಪವರ್‌ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಸಂಸ್ಥೆ 36 ಸೂಪರ್‌ವೈಸರ್ ಹಾಗೂ ಎಂಜಿನಿಯರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು: ಸೂಪರ್‌ವೈಸರ್ ಹಾಗೂ ಎಂಜಿನಿಯರ್‌ ಹುದ್ದೆಗಳ ಸಂಖ್ಯೆ: 36 ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದಬಿಇ ಅಥವಾ ಬಿಟೆಕ್‌, ಬಿಎಸ್‌ಸಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಸೂಪರ್‌ವೈಸರ್‌ ಹುದ್ದೆಗಳಿಗೆ ಡಿಪ್ಲೊಮಾ ಪಡೆದವರು ಅರ್ಜಿ ಸಲ್ಲಿಸಬಹುದು. ವಯೋಮಿತಿ: ಮಾರ್ಚ್‌ 6, 2020ಕ್ಕೆ ಅನುಗುಣವಾಗಿ ಅಭ್ಯರ್ಥಿಯ ವಯಸ್ಸು 29 ಮೀರಿರಬಾರದು. ಸರ್ಕಾರಿ ನಿಯಮಗಳ ಅನ್ವಯ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಅರ್ಜಿ ಶುಲ್ಕ: ಫೀಲ್ಡ್‌ ಎಂಜಿನಿಯರ್ ₹400, ಫೀಲ್ಡ್ ಸೂಪರ್‌ವೈಸರ್ ₹300. ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕರು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 6, 2020 ಲಿಂಕ್:://..////Recruitment_for_the_post_of_FE_%26_FS_in_NR-III_on_Contract_Basis_0. ವೆಬ್‌ಸೈಟ್‌:://.. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.