ಉದ್ಯೋಗವಾರ್ತೆ: ಎನ್‌ಪಿಸಿಐಎಲ್‌ನಲ್ಲಿ 200 ಎಕ್ಸಿಕ್ಯೂಟಿವ್‌ ಟ್ರೈನಿ ಹುದ್ದೆಗಳು ಎನ್‌ಪಿಸಿಐಎಲ್‌ನಲ್ಲಿ 200 ಎಕ್ಸಿಕ್ಯೂಟಿವ್‌ ಟ್ರೈನಿ ಹುದ್ದೆಗಳು ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್‌ (ಎನ್‌ಪಿಸಿಐಎಲ್‌) ಖಾಲಿ ಇರುವ ಟ್ರೈನಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆ: ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳ ಸಂಖ್ಯೆ: 200 ಸ್ಥಳ: ಭಾರತದೆಲ್ಲೆಡೆ ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಇ, ಬಿಟೆಕ್‌, ಬಿಎಸ್‌ಸಿ, ಎಂಟೆಕ್ ಪದವಿಯನ್ನು ಶೇ 60 ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು. ವಯೋಮಿತಿ: ಏಪ್ರಿಲ್‌ 2, 2020ಕ್ಕೆ ಅನ್ವಯವಾಗುವಂತೆ 41 ವರ್ಷ ಮೀರಿರಬಾರದು. ವಯೋಮಿತಿ ಸಡಿಲಿಕೆ: ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ ಅವರಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ. ಅರ್ಜಿ ಶುಲ್ಕ: ಸಾಮಾನ್ಯ ಹಾಗೂ ಒಬಿಸಿ ವರ್ಗದ ಪುರುಷ ಅಭ್ಯರ್ಥಿಗಳಿಗೆ ₹500 ಹಾಗೂ ಎಸ್‌ಸಿ, ಎಸ್‌ಟಿ, ಅಂಗವಿಕಲ ಹಾಗೂ ಮಾಜಿ ಸೈನಿಕರಿಗೆ ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ: ವೈಯಕ್ತಿಕ ಸಂದರ್ಶನದ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 9, 2021 ಹೆಚ್ಚಿನ ಮಾಹಿತಿಗೆ: ://..//. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.