ಉದ್ಯೋಗ: ಇಂಡಿಯನ್‌ ಆಯಿಲ್‌ನಲ್ಲಿ ಅಪ್ರೆಂಟಿಸ್‌ ಹುದ್ದೆಗಳು ಇಂಡಿಯನ್‌ ಆಯಿಲ್‌ನಲ್ಲಿ ಅಪ್ರೆಂಟಿಸ್‌ ಹುದ್ದೆಗಳು ಇಂಡಿಯನ್ ಆಯಿಲ್‌ ಕಾರ್ಪೊರೇಷನ್ ಲಿಮಿಟೆಡ್‌ (ಐಒಸಿಎಲ್‌) ಅಪ್ರೆಂಟಿಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆ: ಟೆಕ್ನಿಕಲ್ ಹಾಗೂ ನಾನ್ ಟೆಕ್ನಿಕಲ್ ಅಪ್ರೆಂಟಿಸ್‌ ಹುದ್ದೆಗಳ ಸಂಖ್ಯೆ: 346 ಸ್ಥಳ: ಭಾರತದೆಲ್ಲೆಡೆ ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಐಟಿಐ, ಡಿಪ್ಲೊಮಾ, ಪದವಿ ಅಥವಾ 12ನೇ ತರಗತಿ ಮುಗಿಸಿದವರು ಅರ್ಜಿ ಸಲ್ಲಿಸಬಹುದು. ವಯೋಮಿತಿ: ಕನಿಷ್ಠ 18 ವರ್ಷ ಹಾಗೂ ಗರಿಷ್ಠ 24 ವರ್ಷ (ಫೆಬ್ರುವರಿ 28 2021ಕ್ಕೆ ಅನ್ವಯವಾಗುವಂತೆ). ವಯೋಮಿತಿ ಸಡಿಲಿಕೆ: ಒಬಿಸಿ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ. ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆಯ ಮೂಲಕ ಅರ್ಜಿ ಶುಲ್ಕ: ಇಲ್ಲ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್ 7, 2021 ಹೆಚ್ಚಿನ ಮಾಹಿತಿಗೆ: ://.///Advertisement_for_Apprentice_Engagement_2020-21_1st_cycle. *** ನೆಹರೂ ಯುವಕೇಂದ್ರದಲ್ಲಿ ಸ್ವಯಂಸೇವಕ ಹುದ್ದೆಗಳು ನೆಹರೂ ಯುವ ಕೇಂದ್ರ ಸಂಘಟನ್ (ಎನ್‌ವೈಕೆಎಸ್‌) ಸ್ವಯಂ ಸೇವಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆ: ಸ್ವಯಂ ಸೇವಕ ಹುದ್ದೆಗಳ ಸಂಖ್ಯೆ: 13206 ಸ್ಥಳ: ಭಾರತದೆಲ್ಲೆಡೆ ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಮುಗಿಸಿರಬೇಕು. ವಯೋಮಿತಿ: ಕನಿಷ್ಠ 18, ಗರಿಷ್ಠ 29 ವರ್ಷ ಅರ್ಜಿ ಶುಲ್ಕ: ಇಲ್ಲ ನೇಮಕಾತಿ ಪ್ರಕ್ರಿಯೆ: 10ನೇ ತರಗತಿಯ ಅಂಕಗಳು ಹಾಗೂ ಬೇಸಿಕ್ ಕಂಪ್ಯೂಟರ್ ಜ್ಞಾನ ಆಧರಿಸಿ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಫೆಬ್ರುವರಿ 20, 2021 ಹೆಚ್ಚಿನ ಮಾಹಿತಿಗೆ: ://..//NYVSelection202021/NYVSelection202021. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.