, ಪಾಸು: ಹಿಂದೂಸ್ತಾನ್‌ ಕಾಪರ್‌ನಲ್ಲಿ 120 ಅಪ್ರೆಂಟಿಸ್‌ಗಳಿಗೆ ಅರ್ಜಿ ಬೆಂಗಳೂರು: ಹಿಂದೂಸ್ತಾನ್‌ ಕಾಪರ್‌ ಲಿಮಿಟೆಡ್‌ನ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 120 ಅಪ್ರೆಂಟಿಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಗಳನ್ನು ಹಾಕಬೇಕು. ಕೇಂದ್ರ ಸರ್ಕಾರದಅಧಿಕೃತ ವೆಬ್‌ಸೈಟ್ ..inಗೆ ಲಾಗಿನ್‌ ಆಗಿ ನೋಂದಣಿ ಮಾಡಬೇಕು. ಹುದ್ದೆಗಳ ಮಾಹಿತಿ:ಫಿಟ್ಟರ್, ವೆಲ್ಡರ್, ಪೇಂಟರ್‌, ಕಾರ್ಪೆಂಟರ್, ಎಲೆಕ್ಟ್ರಿಷಿಯನ್‌, ಎಲೆಕ್ಟ್ರಾನಿಕ್ ಮೆಕಾನಿಕ್, ವೈರ್‌ಮನ್‌, ಟರ್ನರ್‌. ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಪೂರ್ಣಗೊಳಿಸಿರುವುದರ ಜತೆಗೆ ಸಂಬಂಧಪಟ್ಟ ಟ್ರೇಡ್‌ಗಳಲ್ಲಿ ಐಟಿಐ ತರಬೇತಿ ಪ್ರಮಾಣಪತ್ರ ಪಡೆದಿರಬೇಕು. ವಯೋಮಿತಿ: ಗರಿಷ್ಠ 25 ವರ್ಷಗಳನ್ನು ಮೀರಿರಬಾರದು. (ಸರ್ಕಾರದ ನಿಯಮಗಳ ಅನ್ವಯ ಮೀಸಲಾತಿ ಸಡಿಲಿಕೆ ಇರುತ್ತದೆ). ವಯೋಮಿತಿ ಸಡಿಲಿಕೆ:ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು. ನೇಮಕಾತಿ ಪ್ರಕ್ರಿಯೆ: ಲಿಖಿತ ಹಾಗೂ ದೈಹಿಕ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಅಂತಿಮವಾಗಿ ದಾಖಲೆಗಳ ಪರಿಶೀಲನೆ ಮಾಡುವ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಅರ್ಜಿ ಸಲ್ಲಿಸುವ ವಿಧಾನ ಹಾಗೂ ನೇಮಕಾತಿ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯ ಲಿಂಕ್‌ ಮೇಲೆ ಕ್ಲಿಕ್ಕಿಸಿ. ಅರ್ಜಿ ಸಲ್ಲಿಸಲು ಕೊನೆಯ ದಿನ:13 ಮಾರ್ಚ್‌ 2020 ಅಧಿಸೂಚನೆ ಲಿಂಕ್‌:://..///0-637179081435164140-. ವೆಬ್‌ಸೈಟ್‌:://.. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.