, ವಿದ್ಯಾರ್ಹತೆ: IOCLನಲ್ಲಿ 500 ಟ್ರೇಡ್‌ ಅಪ್ರೆಂಟಿಸ್‌ಗಳಿಗೆ ಅರ್ಜಿ ಮುಂಬೈ: ಇಂಡಿಯನ್ ಆಯಿಲ್ ಕಾರ್ಪೊರೇಶನ್‌ ಲಿಮಿಟೆಡ್‌ನಲ್ಲಿ ಖಾಲಿ ಇರುವ 500 ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇದನ್ನೂ ಓದಿ:ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಇವುಗಳಲ್ಲಿ 364 ಟೆಕ್ನಿಕಲ್‌ ಹಾಗೂ 136 ನಾನ್‌ ಟೆಕ್ನಿಕಲ್‌ಅಪ್ರೆಂಟಿಸ್‌ಗಳ ನೇಮಕಾತಿ ನಡೆಯಲಿದೆ. ನೇಮಕಾತಿಗೊಂಡ ಅಭ್ಯರ್ಥಿಗಳು ಮಹಾರಾಷ್ಟ್ರ,ಗುಜರಾತ್‌, ಗೋವಾ, ಮಧ್ಯಪ್ರದೇಶ ಹಾಗೂ ಚತ್ತೀಸ್‌ಗಢ ರಾಜ್ಯಗಳಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಟ್ರೇಡ್‌ ಅಪ್ರೆಂಟಿಸ್ ಸಂಖ್ಯೆ: 500 ಟ್ರೇಡ್‌ಗಳು: ಫಿಟ್ಟರ್‌, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್, ಮೆಕಾನಿಕ್‌, ಇನ್‌ಸ್ಟ್ರೂಮೆಂಟ್ ಮೆಕಾನಿಕ್‌, ಮೆಕಾನಿಸ್ಟ್ ಟ್ರೇಡ್‌ ವಿದ್ಯಾರ್ಹತೆ: ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ಜತೆಗೆ ಐಟಿಐ ಪೂರ್ಣಗೊಳಿಸಿರಬೇಕು. ವಯೋಮಿತಿ: 28 ಫೆಬ್ರುವರಿ 2020ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 24 ವರ್ಷ ವಯಸ್ಸಾಗಿರಬೇಕು. ಅರ್ಜಿ ಶುಲ್ಕ: ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ನೇಮಕಾತಿ: ಕೌಶಲ್ಯ ಪರೀಕ್ಷೆ ಅಥವಾ ಲಿಖಿತ ಪರೀಕ್ಷೆ ಮೂಲಕ ನೇಮಕಾತಿ ನಡೆಯಲಿದೆ. ಇದನ್ನೂ ಓದಿ:ಕರ್ನಾಟಕ ಸರ್ಕಾರ | ಪೊಲೀಸ್‌ ಇಲಾಖೆ: 54 ವೈಜ್ಞಾನಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಅರ್ಜಿ ಸಲ್ಲಿಸುವ ವಿಧಾನ: ಅಭ್ಯರ್ಥಿಗಳನ್ನು ಅರ್ಜಿಯನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಭರ್ತಿ ಮಾಡಿದ ಆನ್‌ಲೈನ್‌ ಅರ್ಜಿಯಲ್ಲಿ ಅಗತ್ಯ ಶೈಕ್ಷಣಿಕ ದಾಖಲೆ ಪತ್ರಗಳನ್ನು ಅಪ್‌ಲೋಡ್‌ ಮಾಡಬೇಕು. ತರಬೇತಿ ಭ್ಯತೆ, ನೇಮಕಾತಿ ವಿಧಾನ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ ಆಸಕ್ತ ಅಭ್ಯರ್ಥಿಗಳುಇಂಡಿಯನ್ ಆಯಿಲ್ ಕಾರ್ಪೊರೇಶನ್‌ ಲಿಮಿಟೆಡ್‌ನhttps://.. ವೆಬ್‌ಸೈಟ್‌ ನೋಡಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನ: 03 ಮಾರ್ಚ್‌ 2020 ಲಿಂಕ್‌:://..///Engagement_of_Technical_and_Non_Technical_Trade. ವೆಬ್‌ಸೈಟ್‌:://.. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.