ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿ ಮೈಸೂರು ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಕರೆಯಲಾಗಿದೆ. * ಹುದ್ದೆಗಳ ಸಂಖ್ಯೆ: 16 *ವಿದ್ಯಾರ್ಹತೆ: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಕನ್ನಡ, ಆಂಗ್ಲ ಬೆರಳಚ್ಚು ಹಾಗೂ ಶೀಘ್ರ ಲಿಪಿ ಕೋರ್ಸ್‌ ಅನ್ನು ಪ್ರೌಢ ದರ್ಜೆಯಲ್ಲಿ ಪಾಸಾಗಿರಬೇಕು. ಕಂಪ್ಯೂಟರ್‌ ಜ್ಞಾನ ಅವಶ್ಯಕವಾಗಿರಬೇಕು. * ವೇತನ ಶ್ರೇಣಿ: ₹27,650(ಮೂಲ ವೇತನ)ರಿಂದ ₹52,650 *ನಿಗದಿತ ಶುಲ್ಕ: ಸಾಮಾನ್ಯ, ಪ್ರವರ್ಗ- 1,2ಎ, 2ಬಿ, 3ಎ ಮತ್ತು 3ಬಿ ಸೇರಿದ ಅಭ್ಯರ್ಥಿಗಳು ₹300ಪಾವತಿಸಬೇಕು. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಅಂಗವಿಕಲ ಅಭ್ಯರ್ಥಿಗಳಿಗೆ ₹150 ಮಾತ್ರ. * ವಯೋಮಿತಿ ಸಡಿಲಿಕೆ: ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳು. *ಅರ್ಜಿ ಸಲ್ಲಿಸುವ ವಿಧಾನ: ಕೆಳಗೆ ನೀಡಿರುವ ಅಧಿಸೂಚನೆ ಲಿಂಕ್‌ ನೋಡುವುದು. *ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ: 20-03-2020 *ಅರ್ಜಿ ಸಲ್ಲಿಸುವ ಕೊನೆಯ ದಿನ: 19-04-2020 *ಅಧಿಸೂಚನೆ ಲಿಂಕ್‌: ://...////Stenographers_Mysuru.⇒ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.