ಬಿಇಎಂಎಲ್‌ನಲ್ಲಿ ವಿವಿಧ ಹುದ್ದೆಗಳು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿಇಎಂಎಲ್‌)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. *ಹುದ್ದೆಗಳು: ಮ್ಯಾನೇಜರ್‌, ಡೆಪ್ಯುಟಿ ಜನರಲ್ ಮ್ಯಾನೇಜರ್‌ ಹಾಗೂ ಅಸಿಸ್ಟೆಂಟ್ ಮ್ಯಾನೇಜರ್ *ವಿದ್ಯಾರ್ಹತೆ: ಮಾನ್ಯತೆ ‍ಪಡೆದ ವಿಶ್ವವಿದ್ಯಾಲಯಗಳಿಂದ ಎಂಜಿನಿಯರಿಂಗ್, ಡಿಪ್ಲೊಮಾ, ಎಂಬಿಎ, ಎಲ್‌ಎಲ್‌ಎಂ ಹಾಗೂ ಎಲ್‌ಎಲ್‌ಬಿ ಪದವಿ ಮುಗಿಸಿರಬೇಕು. *ವಯೋಮಿತಿ: ಕನಿಷ್ಠ 30 ವರ್ಷ ಹಾಗೂ ಗರಿಷ್ಠ 48 ವರ್ಷ ವಯೋಮಿತಿ ಹೊಂದಿರಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. *ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹500. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. *ಅರ್ಜಿ ಸಲ್ಲಿಕೆ ವಿಧಾನ: ಆಸಕ್ತ ಅಭ್ಯರ್ಥಿಗಳು ಬಿಇಎಂಎಲ್‌ನ ://.*./ ಈ ವೆಬ್‌ಸೈಟ್‌ನಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅದನ್ನು ಡೌನ್‌ಲೋಡ್‌ ಮಾಡಿಕೊಂಡು ಪ್ರಿಂಟೌಟ್ ತೆಗೆದು ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು. ವಿಳಾಸ: ಹಿರಿಯ ವ್ಯವಸ್ಥಾಪಕರು, ಬಿಇಎಂಎಲ್ ಲಿಮಿಟೆಡ್, ನೇಮಕಾತಿ ವಿಭಾಗ, ಬಿಇಎಂಎಲ್ ಸೌಧ, ನಂ.23/1, 4ನೇ ಮುಖ್ಯ ರಸ್ತೆ, ಎಸ್‌.ಆರ್ ನಗರ, ಬೆಂಗಳೂರು-560027. *ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 31, 2020 *ಅಧಿಸೂಚನೆ ಲಿಂಕ್‌: ://.*./Current_job.⇒ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.