ವಾಕ್ ಮತ್ತು ಶ್ರವಣ ಸಂಸ್ಥೆ: ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕೆಲಸ ಮಾಡಬೇಕು. ಹುದ್ದೆಗಳ ವಿವರ: ಪ್ರೊಫೆಸರ್‌, ಹೆಡ್ ಪೇಟೆಂಟ್ ಸೆಲ್‌, ಅಸಿಸ್ಟೆಂಟ್ ಆಡಿಟ್‌ ಆಫೀಸರ್ ಹಾಗೂ ಅಕೌಂಟೆಂಟ್‌ ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಎಂಬಿಬಿಎಸ್‌, ಎಂಎಸ್, ಬಿಇ, ಬಿ.ಟೆಕ್ ಪದವಿ ಹೊಂದಿರಬೇಕು. ವಯೋಮಿತಿ: ಪ್ರೊಫೆಸರ್ ಹುದ್ದೆಗೆ ಗರಿಷ್ಠ 50 ವರ್ಷ, ಹೆಡ್ ಪೇಟೆಂಟ್ ಸೆಲ್ ಹುದ್ದೆಗೆ ಗರಿಷ್ಠ 35 ವರ್ಷ, ಅಸಿಸ್ಟೆಂಟ್ ಆಡಿಟ್ ಆಫೀಸರ್ ಹುದ್ದೆಗೆ ಗರಿಷ್ಠ 30 ವರ್ಷ ಮತ್ತು ಅಕೌಂಟೆಂಟ್ ಹುದ್ದೆಗೆ ಗರಿಷ್ಠ 56 ವರ್ಷ. ಅರ್ಜಿ ಶುಲ್ಕ: ಸಾಮಾನ್ಯ ವರ್ಗ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ ₹ 100, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹ 40. ಮಹಿಳಾ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಅರ್ಜಿ ಸಲ್ಲಿಕೆಯ ವಿಧಾನ: ಆಸಕ್ತ ಆಭ್ಯರ್ಥಿಗಳು ://.// ಈ ವೆಬ್‌ಸೈಟ್‌ನಲ್ಲಿ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು, ಅರ್ಜಿಯನ್ನು ಭರ್ತಿ ಮಾಡಿ – ಮುಖ್ಯ ಆಡಳಿತಾಧಿಕಾರಿ, ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006 ಈ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 27, 2020 ‌ ಹೆಚ್ಚಿನ ಮಾಹಿತಿಗೆ ಈ ಕೆಳಗೆ ನೀಡಿರುವ ವೆಬ್‌ಸೈಟ್‌ ನೋಡಬಹುದು:://.// ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.