ಯುಪಿಎಸ್‌ಸಿ: 49 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ ಕೇಂದ್ರ ಲೋಕಸೇವಾ ಆಯೋಗವು, 49 ಜಿಯೊಫಿಸಿಸ್ಟ್‌ ಹಾಗೂ ಎಸ್‌ಡಿಎಂಒ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. *ವಿದ್ಯಾರ್ಹತೆ: ಭೌತವಿಜ್ಞಾನ, ರಸಾಯನವಿಜ್ಞಾನ, ಭೂಭೌತವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ, ಬಿಸಿಎ, ಎಂಸಿಎ, ಎಂಬಿಬಿಎಸ್‌ (ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿವೆ). *ವಯೋಮಿತಿ: ಹುದ್ದೆಗೆ ಅನುಗುಣವಾಗಿ ವ್ಯತ್ಯಾಸಗಳಿದ್ದು, ಇಲಾಖೆಯ ಜಾಲತಾಣದಲ್ಲಿ ಪರಿಶೀಲಿಸಬಹುದು. *ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹25. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. *ಉದ್ಯೋಗ ಸ್ಥಳ: ಭಾರತದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. *ಅರ್ಜಿ ಸಲ್ಲಿಸಲು ಕೊನೆಯ ದಿನ: 27 ಫೆಬ್ರುವರಿ 2020. *ಹೆಚ್ಚಿನ ಮಾಹಿತಿಗೆ: ://./31J2XdK ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.