ಹೆಸ್ಕಾಂನಲ್ಲಿ 246 ಅಪ್ರೆಂಟಿಸ್‌ ಹುದ್ದೆಗಳು ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಹೆಸ್ಕಾಂ) ಎಲೆಕ್ಟ್ರಿಷಿಯನ್ ವೃತ್ತಿ ತರಬೇತಿ ನೀಡಲು 246 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. * ವಿದ್ಯಾರ್ಹತೆ: ಮಾನ್ಯತೆ ಪಡೆದವಿದ್ಯಾಸಂಸ್ಥೆಯಿಂದ ಐಟಿಐ ಪೂರ್ಣಗೊಳಿಸಿರಬೇಕು. * ವಯೋಮಿತಿ: ಗರಿಷ್ಠ 25 ವರ್ಷ ಮೀರಿರಬಾರದು (ಮೀಸಲಾತಿ ಅನ್ವಯ ಸಡಿಲಿಕೆ ಇದೆ). *ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹50. ಇತರೆ ಅಭ್ಯರ್ಥಿಗಳಿಗೆ ₹100. *ವೇತನ: ₹10,926 ತಿಂಗಳಿಗೆ. *ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ. *ಉದ್ಯೋಗ ಸ್ಥಳ: ಹುಬ್ಬಳ್ಳಿ. *ಅರ್ಜಿ ಸಲ್ಲಿಸಲು ಕೊನೆಯ ದಿನ: 18 ಫೆಬ್ರುವರಿ 2020 ಹೆಚ್ಚಿನ ಮಾಹಿತಿಗೆ:://./37abQy7 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.