ಮಂಡ್ಯ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ 54 ಗ್ರಾಮ ಲೆಕ್ಕಿಗರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆ: ಗ್ರಾಮ ಲೆಕ್ಕಿಗರು * ಸ್ಥಳ: ಮಂಡ್ಯ ಜಿಲ್ಲೆ * ವೇತನ: ₹21,400 ರಿಂದ ₹42,000 * ವಿದ್ಯಾರ್ಹತೆ: ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪಿಯುಸಿ ಮುಗಿಸಿರಬೇಕು. * ವಯೋಮಿತಿ: ಕನಿಷ್ಠ 18 ವರ್ಷ, ಗರಿಷ್ಠ 35. 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 3 ವರ್ಷಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ. * ಅರ್ಜಿ ಶುಲ್ಕ: 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ₹200 ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ₹100. * ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 18, 2020 * ಅಧಿಸೂಚನೆ ಲಿಂಕ್‌: ://-.../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.