ಚಿತ್ರದುರ್ಗದಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕರ ಹುದ್ದೆ ಚಿತ್ರದುರ್ಗ ಜಿಲ್ಲೆಯಲ್ಲಿ ಖಾಲಿ ಇರುವ 92 ಕಾರ್ಯಕರ್ತೆಯರು ಹಾಗೂ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.‌ * ಹುದ್ದೆಗಳು: ಕಾರ್ಯಕರ್ತೆಯರು ಹಾಗೂ ಸಹಾಯಕರು * ವಿದ್ಯಾರ್ಹತೆ: ಹುದ್ದೆಗಳಿಗೆ ಅನುಗುಣವಾಗಿ ಎಸ್ಸೆಸ್ಸೆಲ್ಸಿ, 4ನೇ ತರಗತಿ ಹಾಗೂ 9ನೇ ತರಗತಿ ಮುಗಿಸಿರಬೇಕು. * ವಯೋಮಿತಿ: ಕನಿಷ್ಠ 18 ಹಾಗೂ ಗರಿಷ್ಠ 35. ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. * ಅರ್ಜಿ ಶುಲ್ಕ: ಇಲ್ಲ * ಸ್ಥಳ: ಚಿತ್ರದುರ್ಗ * ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 4, 2020 * ಅಧಿಸೂಚನೆ ಲಿಂಕ್: ://.../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.