ಭಾರತೀಯ ರೈಲ್ವೆ ಇಲಾಖೆ: 1273 ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ಭಾರತೀಯ ರೈಲ್ವೆ ಇಲಾಖೆಯ ಪಶ್ಚಿಮ– ಮಧ್ಯ ವಿಭಾಗದಲ್ಲಿ 1273 ಟ್ರೇಡ್‌ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐ ಪೂರ್ಣಗೊಳಿಸಿರಬೇಕು. ವಯೋಮಿತಿ: 1 ಜನವರಿ 2020ಕ್ಕೆ ಅನ್ವಯವಾಗುವಂತೆ ಕನಿಷ್ಠ 18, ಗರಿಷ್ಠ 24. ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ದಾಖಲೆಗಳ ಪರಿಶೀಲನೆ. ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಸಾಮಾನ್ಯ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹100+ ಜಿಎಸ್‌ಟಿ. ಉದ್ಯೋಗ ಸ್ಥಳ: ಜಬಲ್‌ಪುರ, ಮಧ್ಯಪ್ರದೇಶ ಅರ್ಜಿ ಸಲ್ಲಿಸಲು ಕೊನೆಯ ದಿನ: 14 ಫೆಬ್ರುವರಿ 2020. ಹೆಚ್ಚಿನ ಮಾಹಿತಿಗೆ: ://./363Yy5R ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.