ಇಸಿಐಎಲ್‌ನಲ್ಲಿ 64 ಹುದ್ದೆಗಳು ಸರ್ಕಾರಿ ಸ್ವಾಮ್ಯದ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್‌ ಇಂಡಿಯಾ ಟ್ರೇನಿ ಎಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಎಂಜಿನಿಯರಿಂಗ್ ಪದವಿಯನ್ನು ಶೇ 65ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು (ಮೀಸಲಾತಿ ಅನ್ವಯ ಸಡಿಲಿಕೆ ಇದೆ). ವಯೋಮಿತಿ: 30 ನವೆಂಬರ್ 2019ಕ್ಕೆ ಅನ್ವಯವಾಗುವಂತೆ ಗರಿಷ್ಠ 25 ವರ್ಷ ನೇಮಕಾತಿ ಪ್ರಕ್ರಿಯೆ: ಸಂದರ್ಶನ. ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹500. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ: 01 ಜನವರಿ 2020 ಹೆಚ್ಚಿನ ಮಾಹಿತಿಗೆ: ... ಅಥವಾ ://... ಸಂಪರ್ಕಿಸಿ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.