: ಜೂನಿಯರ್‌ ಅಸೋಸಿಯೇಟ್ಸ್‌ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟ ನವದೆಹಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಜೂನಿಯರ್‌ ಅಸೋಸಿಯೇಟ್ಸ್‌ ವೃಂದದ ನೇಮಕಾತಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ, ಜೂನಿಯರ್‌ ಅಸೋಸಿಯೇಟ್ಸ್‌ (ಕಸ್ಟಮರ್‌ ಸಪೋರ್ಟ್‌ ಮತ್ತು ಸೇಲ್ಸ್‌) ಕ್ಲರಿಕಲ್‌ ಕೇಡರ್‌ ಹುದ್ದೆಗಳಿಗೆಪರೀಕ್ಷೆಯನ್ನು ಕಳೆದ ಸೆಪ್ಟೆಂಬರ್‌ ತಿಂಗಳಲ್ಲಿ ನಡೆಸಿತ್ತು. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ ಅಧಿಕೃತ ವೆಬ್‌ಸೈಟ್‌ನಲ್ಲಿ ಈ ಪರೀಕ್ಷೆಯ ಫಲಿತಾಂಶವನ್ನು ಬುಧವಾರ ಪ್ರಕಟಿಸಿದೆ. , - - 2019 . : ://./W03e8ukCAp ../ ಈ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳನ್ನು ನೇಮಕಾತಿಗಾಗಿ ಮುಂದಿನ ದಿನಗಳಲ್ಲಿ ಕರೆಯಲಾಗುವುದು. ಇದಕ್ಕೂ ಮುನ್ನ ಅಭ್ಯರ್ಥಿಗಳು ಸ್ಥಳೀಯ ಭಾಷೆಯ (10ನೇ ತರಗತಿ ಮಟ್ಟದ) ಪರೀಕ್ಷೆಯನ್ನು ಎದುರಿಸಬೇಕಾಗುತ್ತದೆ. ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ಫಲಿತಾಂಶಕ್ಕಾಗಿ ಎಸ್‌ಬಿಐನ ವೆಬ್‌ಸೈಟ್‌ ನೋಡಬಹುದು. ವೆಬ್‌ಸೈಟ್‌:://../ ಫಲಿತಾಂಶ ಪಟ್ಟಿಯ ಲಿಂಕ್‌:://./2PzFDLI ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.