ಪದವೀಧರರಿಗೆ ಉದ್ಯೋಗ: ಬ್ಯಾಂಕಿಂಗ್‌ ಕ್ಷೇತ್ರದಲ್ಲಿ 1163 ಹುದ್ದೆಗಳಿಗೆ ಅರ್ಜಿ ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಕೆಲಸ ಮಾಡಬೇಕು ಎಂಬ ಇಚ್ಚೆ ಇರುವವರಿಗೆಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆಯು (ಐಬಿಪಿಎಸ್‌) ಅವಕಾಶ ಕಲ್ಪಿಸಿದೆ. ಸ್ನಾತಕೋತ್ತರ ಪದವಿ ಪಡೆದಿರುವ ಅಭ್ಯರ್ಥಿಗಳು ಉದ್ಯೋಗಕ್ಕೆ ಅರ್ಜಿ ಸಲ್ಲಿಸಬಹುದು. 1163 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಐಟಿ, ಕೃಷಿ, ಕಾನೂನು, ಎಚ್‌ಆರ್‌, ಮಾರ್ಕೆಟಿಂಗ್‌ ಹಾಗೂ ರಾಜಭಾಷೆ ಅಧಿಕಾರಿ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತರ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಎಂಬಿಎ, ಸಿಎ, ಸ್ನಾತಕೋತ್ತರ ಪದವಿ ಪಡೆದಿರಬೇಕು. ವಿದ್ಯಾರ್ಹತೆಯ ಹೆಚ್ಚಿನ ಮಾಹಿತಿಗೆ ಈ ಕೆಳಗೆ ನಿಡಿರುವ ಅಧಿಸೂಚನೆಯ ಲಿಂಕ್‌ ಮೇಲೆ ಮಾಹಿತಿ ಪಡೆಯಬಹುದು. ವಯಸ್ಸು: 26 ನವೆಂಬರ್‌ 2019ಕ್ಕೆ ಅನ್ವಯವಾಗುವಂತೆ 20ರಿಂದ 30 ವರ್ಷದೊಳಗಿನವರಾಗಿರಬೇಕು. (ಮೀಸಲಾತಿ ನಿಯಮಗಳು ಅನ್ವಯಿಸುತ್ತವೆ). ವಯೋಮಿತಿ ಸಡಿಲಿಕೆ:ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಮಗವಿಕಲರಿಗೆ 10 ವರ್ಷಗಳು. ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅರ್ಜಿ ಶುಲ್ಕ: ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹600, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ₹100. ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ: 26–11–19 ಅಧಿಸೂಚನೆಯ ಲಿಂಕ್‌:://./2qQnuin ಹೆಚ್ಚಿನ ಮಾಹಿತಿಗೆ: ://./2JZsJTi ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.