ಕರ್ನಾಟಕ ಸರ್ಕಾರ: ಪ್ರವಾಸೋದ್ಯಮ ನಿಗಮದಲ್ಲಿ 79 ಹುದ್ದೆಗಳು, ವೇತನ ₹ 30,000 ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಒಟ್ಟು ಹುದ್ದೆಗಳ ಸಂಖ್ಯೆ: 79 ಹುದ್ದೆಗಳ ಸಂಖ್ಯೆ: ವ್ಯವಸ್ಥಾಪಕ–04, ಸಹಾಯಕವ್ಯವಸ್ಥಾಪಕ–03, ಸ್ವಾಗತಕಾರರು–04, ದ್ವಿತೀಯ ದರ್ಜೆ ಸಹಾಯಕ–07, ಸೂಪರ್‌ವೈಸರ್‌–04, ಸ್ಟೋರ್ ಕೀಪರ್‌–04, ಅಡುಗೆಯವರು–06, ಸಹಾಯಕಅಡುಗೆಯವರು–06, ಅಡುಗೆ ಸಹಾಯಕರು–10, ಸಹಾಯಕರು (ರೂಂಬಾಯ್‌)– 28. ಅರ್ಹ ಅಭ್ಯರ್ಥಿಗಳು ನಿಗದಿತಅರ್ಜಿ ನಮೂನೆಯಲ್ಲಿ ತಮ್ಮ ಸ್ವವಿವರವನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಹತೆ: ಅಗತ್ಯ ವಿದ್ಯಾರ್ಹತೆ ಹಾಗೂ ವೇತನ ಶ್ರೇಣಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ನೋಡುವುದು. ಕನಿಷ್ಠ 3 ವರ್ಷಗಳ ಸೇವಾ ಅನುಭವವನ್ನು ಕಡ್ಡಾಯವಾಗಿ ಹೊಂದಿರಬೇಕು. ಅಗತ್ಯ ದಾಖಲೆಗಳು ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ದಿನಾಂಕ 03.02.2020ರೊಳಗೆ ಈ ಕೆಳಕಂಡ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ವಿಳಾಸ ವ್ಯವಸ್ಥಾಪಕರು (ಆಡಳಿತ) ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಕಾರ್ಯನಿರ್ವಾಹಕ ಕಚೇರಿ ನೆಲಮಹಡಿ, ಯಶವಂತಪುರ ಟಿಟಿಎಂಸಿ, ಬಿ.ಎಂ.ಟಿ.ಸಿ ಬಸ್ ನಿಲ್ದಾಣ, ಯಶವಂತಪುರ ವೃತ್ತ, ಬೆಂಗಳೂರು-560 022 ಷರತ್ತು ಮತ್ತು ನಿಬಂಧನೆಗಳು * ಅಭ್ಯರ್ಥಿಗಳು ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸ್ಪೀಡ್ ಪೋಸ್ಟ್/ರಿಜಿಸ್ಟರ್ ಪೋಸ್ಟ್/ ಕೋರಿಯರ್ ಅಥವಾ ನೇರವಾಗಿ ಮೇಲೆ ತಿಳಿಸಿದ ವಿಳಾಸಕ್ಕೆ ಬಂದು ಸಲ್ಲಿಸಬಹುದಾಗಿದೆ. * ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಪದನಾಮವನ್ನು ಲಕೋಟೆ/ಪೋಸ್ಟ್ ಕವರ್‌ ಮೇಲೆ ನಮೂದಿಸತಕ್ಕದ್ದು, ತಪ್ಪಿದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. * ದಿನಾಂಕ: 03.02.2020 ರ ನಂತರದಲ್ಲಿ ಸ್ವೀಕೃತಗೊಂಡ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. * ನಿಗಮವು ಯಾವುದೇ ಕಾರಣವನ್ನು ನೀಡದೆ ಅರ್ಜಿಯನ್ನು ಸ್ವೀಕರಿಸಲು ಅಥವಾ ತಿರಸ್ಕರಿಸುವ ಸಂಪೂರ್ಣ ಅಧಿಕಾರವನ್ನು ಹೊಂದಿರುತ್ತದೆ. * ನಿಗಮವು ನೀಡಿರುವ ನಮೂನೆಯಲ್ಲದೇ, ಇತರೆ ಯಾವುದೇ ನಮೂನೆಯಲ್ಲಿ ಸ್ವವಿವರವನ್ನು ಸಲ್ಲಿಸಿದರೆ ಯಾವುದೇ ಕಾರಣಕ್ಕೂ ಅಂತಹ ಅರ್ಜಿಯನ್ನು ತಿರಸ್ಕರಿಸಲಾಗುವುದು. * ಅಭ್ಯರ್ಥಿಗಳು ಕರ್ನಾಟಕದ ಯಾವುದೇ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸಲು ಸಿದ್ಧರಿರಬೇಕು. * ಸದರಿ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮಾತ್ರ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು. ಅಧಿಸೂಚನೆ ಲಿಂಕ್‌:://./36lilOm ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ:03.02.2020 ವೆಬ್‌ಸೈಟ್‌:://../ ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.