ಕೋಲ್ ಇಂಡಿಯಾ ಲಿಮಿಟೆಡ್‌ನಲ್ಲಿ 1326 ಹುದ್ದೆಗಳು ಕೋಲ್ ಇಂಡಿಯಾ ಲಿಮಿಟೆಡ್‌ನಲ್ಲಿ (ಸಿಐಎಲ್‌) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಬಿ.ಇ/ಬಿ.ಟೆಕ್,ಬಿಎಸ್‌.ಸಿ, ಎಂಸಿಎ, ಸಿಎ. (ಹುದ್ದೆಗೆ ಅನುಗುಣವಾಗಿ ನಿಗದಿಪಡಿಸಲಾಗಿದೆ). ವಯೋಮಿತಿ: 1 ಏಪ್ರಿಲ್‌ 2020ಕ್ಕೆ ಅನ್ವಯವಾಗುವಂತೆ 30 ವರ್ಷ ಮೀರಿರಬಾರದು. ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳು, ಆರ್ಥಿಕವಾಗಿ ಹಿಂದುಳಿದ ವರ್ಗ ಮತ್ತು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ₹1,000. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ. ಉದ್ಯೋಗ ಸ್ಥಳ: ದೇಶದ ಯಾವುದೇ ಪ್ರದೇಶದಲ್ಲಿ ಕೆಲಸ ಮಾಡಲು ಸಿದ್ಧರಿರಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನ: 19 ಜನವರಿ 2020. ಹೆಚ್ಚಿನ ಮಾಹಿತಿಗೆ: ://./34D3Ww3 ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.