ಪಶ್ಚಿಮ ರೈಲ್ವೆ: , ವಿದ್ಯಾರ್ಹತೆ; 3612 ಅಪ್ರೆಂಟಿಸ್‌ ಹುದ್ದೆಗಳು ಮುಂಬೈ: ರೈಲ್ವೆ ಇಲಾಖೆಯ ಪಶ್ಚಿಮ ರೈಲ್ವೆಯಲ್ಲಿ ಖಾಲಿ ಇರುವ 3612 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ವಿವರ: ಫಿಟ್ಟರ್, ಟರ್ನರ್‌, ಎಲೆಕ್ಟ್ರಿಷಿಯನ್, ಮೆಕಾನಿಸ್ಟ್‌, ಪ್ಲಂಬರ್‌, ಪೇಂಟರ್‌ ಹುದ್ದೆಗಳ ನೇಮಕಾತಿ ನಡೆಯಲಿದೆ ಒಟ್ಟು ಹುದ್ದೆಗಳ ಸಂಖ್ಯೆ: 3612 ವಿದ್ಯಾರ್ಹತೆ: ಹುದ್ದೆಗಳಿಗೆ ಸಂಬಂಧಿಸಿದಂತೆ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ತರಬೇತಿ ಭತ್ಯೆ: ಭಾರತ ಸರ್ಕಾರದ ನಿಯಮಗಳ ಅನ್ವಯ ತರಬೇತಿ ಭತ್ಯೆ ನೀಡಲಾಗುವುದು. ವಯೋಮಿತಿ ಸಡಿಲಿಕೆ: ಕನಿಷ್ಠ 15, ಗರಿಷ್ಠ 24 ವರ್ಷದರಾಗಿರಬೇಕು. ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಅರ್ಜಿ ಶುಲ್ಕ:ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹100. ಎಸ್‌ಸಿ / ಎಸ್‌ಟಿ / ಅಂಗವಿಕಲ/ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ನೇಮಕಾತಿ ವಿಧಾನ:ಎಸ್‌ಎಸ್‌ಎಲ್‌ಸಿ ಹಾಗೂ ಐಟಿಐನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್‌ ಲಿಸ್ಟ್‌ ತಯಾರಿಸಿ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸುವ ವಿಧಾನ:ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು. ಅಧಿಕೃತ ವೆಬ್‌ಸೈಟ್‌://.-.// ಗೆ ಲಾಗಿನ್‌ ಆಗಿ ಅರ್ಜಿ ಸಲ್ಲಿಸಬಹುದು. ಇತರೆ ವಿಧಾನದಲ್ಲಿ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅರ್ಜಿ ಸಲ್ಲಿಸಲು ಕೊನೆಯ ದಿನ: 27, ಜೂನ್‌, 2022 ವೆಬ್‌ಸೈಟ್‌:://.-.// ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.