ಆರ್‌.ಎಲ್. ಜಾಲಪ್ಪ ಅಕಾಡೆಮಿಯಿಂದ ಕೆಎಎಸ್‌ಗೆ ಉಚಿತ ತರಬೇತಿ ಕೆಎಎಸ್‌ ಪೂರ್ವಭಾವಿ ಪರೀಕ್ಷೆ ತೆಗೆದುಕೊಳ್ಳುತ್ತಿರುವವರಿಗೆ ಇಲ್ಲೊಂದು ಸುವರ್ಣಾವಕಾಶವಿದೆ. ರಾಮನಗರ ಜಿಲ್ಲೆಯ ಸೋಲೂರಿನಲ್ಲಿರುವ ಆರ್.ಎಲ್‌. ಜಾಲಪ್ಪ ಅಕಾಡೆಮಿಯು ಪ್ರವರ್ಗ 1 ಮತ್ತು ಪ್ರವರ್ಗ 2ಕ್ಕೆ ಸೇರಿದ ಹಿಂದುಳಿದ ವಿದ್ಯಾರ್ಥಿಗಳಿಗೆ ಉಚಿತ ತರಬೇತಿಯನ್ನು ನೀಡುತ್ತಿದೆ. ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕ ಹಾಸ್ಟೆಲ್ ವ್ಯವಸ್ಥೆ ಇದೆ. ಆಸಕ್ತರು ಮೇ 10ರ ಒಳಗೆ ತಮ್ಮ ಸಂಪರ್ಕ ಸಂಖ್ಯೆಯೊಂದಿಗೆ ಸ್ವ ವಿವರಗಳ ಅರ್ಜಿಯನ್ನು ಈ ವಿಳಾಸಕ್ಕೆ ಕಳುಹಿಸಿ. ‘ಕಾರ್ಯದರ್ಶಿ, ಆರ್.ಎಲ್.ಜಾಲಪ್ಪ ಅಕಾಡೆಮಿ (ರಿ). ಬ್ರಹ್ಮಶ್ರೀ ನಾರಾಯಣಗುರು ವಿದ್ಯಾಸಂಸ್ಥೆ, ಆರ್ಯ ಈಡಿಗ ಮಹಾಸಂಸ್ಥಾನ ಸೋಲೂರು, ಮಾಗಡಿ ತಾಲ್ಲೂಕು, ರಾಮನಗರ ಜಿಲ್ಲೆ – 562127 - : rljacademy15@. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.