ಬಿ.ಟೆಕ್ ಪದವಿಗೆ ಅರ್ಜಿ ಆಹ್ವಾನ ಹೈದ್ರಾಬಾದ್ ಮೂಲದ ಮಹೀಂದ್ರ ಎಕೊಲೆ ಸೆಂಟ್ರಲ್ ವಿದ್ಯಾಸಂಸ್ಥೆಯು 2016–- 2020ನೇ ಸಾಲಿನ ಶೈಕ್ಷಣಿಕ ವರ್ಷದ ನಾಲ್ಕು ವರ್ಷಗಳ ಬಿ.ಟೆಕ್ ಪದವಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಿದೆ. ಕಂಪ್ಯೂಟರ್ ಸೈನ್ಸ್, ಇಂಜಿನಿಯರಿಂಗ್, ಎಲೆಕ್ಟ್ರಿಕಲ್ಸ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಮೆಕಾನಿಕಲ್ ಇಂಜಿನಿಯರಿಂಗ್, ಸಿವಿಲ್ ಇಂಜಿನಿಯರಿಂಗ್, ಮುಂತಾದ 60 ವಿಭಾಗಗಳಲ್ಲಿ ಒಟ್ಟು 240 ವಿದ್ಯಾರ್ಥಿಗಳ ದಾಖಲಾತಿಗೆ ಅವಕಾಶವಿದೆ ಎಂದು ಮಹೀಂದ್ರ ಎಕೊಲೆ ಸೆಂಟರ್ ವಿದ್ಯಾಸಂಸ್ಥೆಯು ತಿಳಿಸಿದೆ. ಮಾನ್ಯತೆ ಪಡೆದ ವಿದ್ಯಾ ಸಂಸ್ಥೆಗಳಿಂದ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇಕಡಾ 60 ಅಂಕಗಳೊಂದಿಗೆ ಉತ್ತೀರ್ಣರಾಗಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ... ವೆಬ್ ವಿಳಾಸದಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಜುಲೈ 7ರೊಳಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳನ್ನು ಪ್ರಥಮ ಹಂತದ ಸಂದರ್ಶನಕ್ಕೆ ಆಯ್ಕೆ ಮಾಡಲು ಪರಿಶೀಲಿಸಲಾಗುತ್ತದೆ. ಎನ್ ಆರ್ ಐ, ವಿದ್ಯಾರ್ಥಿಗಳು ಸ್ಕೈಪ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.